ನಂಜನಗೂಡು: ಮಹಾನ್ ಮಾನವತಾವಾದಿ, ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿಬ್ಬಾಣ ದಿನದ ಹಿನ್ನೆಲೆಯಲ್ಲಿ ನಂಜನಗೂಡು ನಗರದಲ್ಲಿರುವ ಡಾ. ಬಿ. ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಿದರು.
ನಂತರ ಕಾಂಗ್ರೆಸ್ ಕಛೇರಿಯಲ್ಲಿ ಜ್ಯೋತಿ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ಅಂಬೇಡ್ಕರ್ ರವರನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಉಪಾಧ್ಯಕ್ಷೆ ರಿಹಾನ ಬಾನು ರವರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುರಹಟ್ಟಿ ಮಹೇಶ್, ಸಿ ಎಂ ಶಂಕರ್ ರವರು ಸೇರಿದಂತೆ ಹಲವರು ಭಾಗವಹಿಸಿದ್ದರು.
PublicNext
06/12/2024 01:43 pm