ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಮತ್ತೆ ಡಿಸೆಂಬರ್ 12ರಿಂದ ಭಾರಿ ಮಳೆ ನಿರೀಕ್ಷೆ

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಡಿಸೆಂಬರ್ 12 ರಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಐ ಎಂ ಡಿ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಇಂದಿನಿಂದ ಡಿಸೆಂಬರ್ 8ರವರೆಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಡಿಸೆಂಬರ್ 12ರಿಂದ ಡಿಸೆಂಬರ್ 15 ರ ವರೆಗೂ ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದ್ದು, ಡಿಸೆಂಬರ್ 12ರಿಂದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

06/12/2024 01:59 pm

Cinque Terre

18.68 K

Cinque Terre

0

ಸಂಬಂಧಿತ ಸುದ್ದಿ