ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮನಗರ: ಭತ್ತದ ಗದ್ದೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ…!

ರಾಮನಗರ : ತಾಲ್ಲೂಕಿನ ಪಾಲಾಭೋವಿದೊಡ್ಡಿಯ ಗದ್ದೆಯಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಅರ್ಕಾವತಿ ನದಿಯ ದಂಡೆ ಬಳಿ ಇರುವ ಚಂದ್ರೇಗೌಡ ಎಂಬುವರ ಗದ್ದೆಯಲ್ಲಿ ಕಾರ್ಮಿಕರು ಭತ್ತದ ಪೈರು ಕೊಯ್ಲು ಮಾಡುವಾಗ ಪೈರುಗಳ ಮಧ್ಯೆ ಮಲಗಿದ್ದ ಹೆಬ್ಬಾವು ಗಮನಿಸಿದ್ದಾರೆ. ನಂತರ ಮಾಲೀಕರ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಬಂದ ಚಂದ್ರೇಗೌಡ ಅವರು, ವಲಯ ಅರಣ್ಯಾಧಿಕಾರಿ (ಆರ್ಎಫ್ಎ) ಮೊಹಮ್ಮದ್ ಮನ್ಸೂರ್ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಮನ್ಸೂರ್ ಅವರು ಅರಣ್ಯ ಇಲಾಖೆ ಸಿಬ್ಬಂದಿ ವರದರಾಜು ಜೊತೆಗೆ ಸ್ಥಳೀಯ ಉರಗ ರಕ್ಷಕ ಸ್ನೇಕ್ ಹರೀಶ್ ಅವರನ್ನು ಸ್ಥಳಕ್ಕೆ ಕಳಿಸಿದ್ದಾರೆ.

ಪೈರುಗಳ ಮಧ್ಯೆ ಇದ್ದ ಹೆಬ್ಬಾವನ್ನು ಹರೀಶ್ ಅವರು ಹಿಡಿದರು. ಗದ್ದೆಯಲ್ಲಿ ಹೆಬ್ಬಾವು ಇರುವ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಬಂದು ಹೆಬ್ಬಾವನ್ನು ಕಣ್ತುಂಬಿಕೊಂಡರು. ಹರೀಶ್ ಅವರು ನಾಜೂಕಾಗಿ ಅದನ್ನು ಹಿಡಿದು ಚೀಲಕ್ಕೆ ತುಂಬಿಸಿ ಬೈಕ್ನಲ್ಲಿ ಕಾಡಿಗೆ ತೆಗೆದುಕೊಂಡು ಹೋಗುವ ಮೈ ನವಿರೇಳಿಸುವಂತಹ ದೃಶ್ಯಕ್ಕೆ ಜನ ಸಾಕ್ಷಿಯಾದರು.

ಹೆಬ್ಬಾವನ್ನು ಸ್ನೇಕ್ ಹರೀಶ್ ಅವರಿಂದ ಸುರಕ್ಷಿತವಾಗಿ ಹಿಡಿಸಿ ಮರಳಿ ರಾಮದೇವರ ಬೆಟ್ಟದ ಕಾಡಿಗೆ ಬಿಡಲಾಯಿತು.

Edited By : Vinayak Patil
PublicNext

PublicNext

06/12/2024 05:12 pm

Cinque Terre

20.67 K

Cinque Terre

0