ಬೆಂಗಳೂರು: ಹೊಸ ವರ್ಷಕ್ಕೆ ಕೆಲ ದಿನಗಳು ಬಾಕಿ ಇದೆ . ಈ ಹಿನ್ನೆಲೆ ಎಲ್ಲಾ ರೀತಿಯಲ್ಲೂ ಸಿದ್ಧತೆ ನಡೆಸಲಾಗುತ್ತಿದೆ. ಪ್ರಮುಖವಾಗಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಿದ್ದತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ದಯಾನಂದ, ನಗರದಲ್ಲಿ ಅಹಿತಕರ ಘಟನೆ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ.
ಹೊಸ ವರ್ಷದ ವೇಳೆ ಡ್ರಗ್ ಹರಿದಾಡದಂತೆ ಸಿಸಿಬಿ ಸೇರಿ ಎಲ್ಲಾ ವಿಭಾಗದ ಪೊಲೀಸರು ಡ್ರಗ್ಸ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ.ಹಳೇ ಡ್ರಗ್ ಪೆಡ್ಲರ್ ಗಳು, ರೌಡಿ ಹಿನ್ನೆಲೆಯುಳ್ಳವರ ತಪಾಸಣೆ ನಡೆಯುತ್ತಿದ್ದು,
ಹೊಸ ವರ್ಷ ಆಯೋಜಕರನ್ನು ಕರೆಸಿ ಸಲಹೆ ಸೂಚನೆ ನೀಡಲಾಗುತ್ತಿದೆ ಎಂದಿದ್ದಾರೆ. ಇನ್ನೂ ಬೇರೆ ಬೇರೆ ಇಲಾಖೆ ಜೊತೆಯೂ ಹೊಸ ವರ್ಷ ಆಚರಣೆ ಬಗ್ಗೆ ಚರ್ಚೆಯಾಗುತ್ತಿದೆ.
ಎಲ್ಲೆಲ್ಲಿ ಲೈಟಿಂಗ್ ಆಗಬೇಕು. ಬೇರೆ ವ್ಯವಸ್ಥೆ ಹೇಗೆ ಇರುಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ತಿರ್ಮಾನಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
PublicNext
06/12/2024 05:30 pm