ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್
ಅಥಣಿ: ಅಥಣಿ ತಾಲೂಕಿನ ಹಲವು ಶಾಲೆಗಳಿಗೆ ಪಠ್ಯಪುಸ್ತಕ ಹಂಚಿಕೆಯಲ್ಲಿ ವಿಳಂಬವಾದ ಕುರಿತು ಪಬ್ಲಿಕ್ ನೆಕ್ಸ್ಟ್ ನಲ್ಲಿ ನಿನ್ನೆಯ ದಿನ "ಗಡಿಯಲ್ಲಿ ಕನ್ನಡಕ್ಕೆ ಕುತ್ತು, ಪುಸ್ತಕ ಹಂಚಿಕೆಯಲ್ಲಿ ವಿಳಂಬ" ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಬಿತ್ತರಿಸಲಾಗಿತ್ತು. ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸೀತಾರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡುವ ನಿಟ್ಟಿನಲ್ಲಿ ತಾಲೂಕಿನ ಆಯಾ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲಾ ವಿದ್ಯಾರ್ಥಿಗಳ ಸಂಖ್ಯೆಗನುಸಾರವಾಗಿ ಪುಸ್ತಕಗಳನ್ನು ಮರು ಹಂಚಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ತಪ್ಪಿತಸ್ಥ ಇಬ್ಬರು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಕೂಡಲೇ ಮಾಹಿತಿ ನೀಡುವಂತೆಯೂ ವಾರ್ನ್ ಮಾಡಿದ್ದಾರೆ.
ಮಕ್ಕಳ ವಿದ್ಯಾಭ್ಯಾಸದ ಕುರಿತು ಕ್ಷೇತ್ರದ ತಾಲೂಕಿನ ಹಲವು ಶಾಲೆಗಳಿಗೆ ಭೇಟಿ ನೀಡಿ, ವರದಿ ಪ್ರಕಟಿಸಿ ಬೆಳಕು ಚೆಲ್ಲಿದ ಪಬ್ಲಿಕ್ ನೆಕ್ಸ್ಟ್ ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
PublicNext
06/12/2024 06:00 pm