ಧಾರವಾಡ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನರೇಗಾ ಕೆಲಸವನ್ನು ಸರಿಯಾಗಿ ನೀಡುತ್ತಿಲ್ಲ. ಕೆಲಸದ ಸಮಯದಲ್ಲಿ ಕಾರ್ಮಿಕರು ಸಾವನ್ನಪ್ಪಿದರೆ 5 ಲಕ್ಷ ಪರಿಹಾರ ನೀಡಬೇಕು, ಗಂಡ ಸತ್ತಿರುವ ಹಾಗೂ ಒಂಟಿ ಜೀವನ ನಡೆಸುತ್ತಿರುವ ಮಹಿಳೆಗೆ ಪ್ರತ್ಯೇಕ ರೇಷನ್ ಕಾರ್ಡ್ ನೀಡಬೇಕು, ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ವರ್ಷ ಕಳೆದರೂ ರೇಷನ್ ಕಾರ್ಡ್ ನೀಡುತ್ತಿಲ್ಲ, ಇದರಿಂದ ಬಡವರು ತೊಂದರೆ ಅನುಭವಿಸುತ್ತಿದ್ದಾರೆ, ಕೂಡಲೇ ಅವರಿಗೆ ರೇಷನ್ ಕಾರ್ಡ್ ನೀಡಬೇಕೆಂದು ಒತ್ತಾಯಿಸಿದರು.
Kshetra Samachara
06/12/2024 06:42 pm