ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಆಚರಣೆ

ಕೊಡಗು : ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ಅಸ್ಪೃಶ್ಯತೆ, ಅಸಮಾನತೆ, ತಾರತಮ್ಯದ ವಿರುದ್ಧ ಹೋರಾಡಿ, ಪ್ರತಿಯೊಬ್ಬರ ಹಕ್ಕುಗಳಿಗಾಗಿ ನ್ಯಾಯ ಮಂಡಿಸಿ, ಈ ನೆಲದ ಪ್ರತಿಯೊಂದು ವಿಚಾರಗಳ ಬಗ್ಗೆಯೂ ಸ್ಪಷ್ಟವಾದ ಅರಿವಿದ್ದ ಪರಿಣಾಮ ದೇಶಕ್ಕೆ ಬಲಿಷ್ಟ ಮತ್ತು ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ ಅಭಿಪ್ರಾಯಿಸಿದರು.

ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಕ್ಯಾಂಪಸ್‌ನ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಆಚರಣೆಯಲ್ಲಿ ಮಾತನಾಡಿದ ಅವರು ಡಾ. ಬಿ.ಆರ್‌. ಅಂಬೇಡ್ಕರ್‌ ಭಾರತ ಕಂಡ ಮಹಾನ್‌ ವ್ಯಕ್ತಿಗಳಲ್ಲೊಬ್ಬರು.

ಭಾರತ ದೇಶಕ್ಕೆ ಇವರು ನೀಡಿರುವ ಕೊಡುಗೆಗಳು ಅಪಾರ. ಅವರ ಜೀವನ ಹಾಗೂ ಪರಂಪರೆ ಸರ್ವರಿಗೂ ಆದರ್ಶಪ್ರಿಯವಾದದ್ದು. ಮಹಾನ್ ಮಾನವತಾವಾದಿಗಳಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಸಮಾಜ ಸುಧಾರಕರಾಗಿದ್ದು. ಇಂದು ಅಂದರೆ ಡಿಸೆಂಬರ್‌ 6 ಇವರ 62ನೇ ಪುಣ್ಯತಿಥಿ. ಈ ದಿನವನ್ನು ಮಹಾಪರಿನಿರ್ವಾಣ ದಿನ ಎಂದು ಭಾರತದಾದ್ಯಂತ ಆಚರಿಸಲಾಗುತ್ತದೆ ಎಂದು ತಿಳಿಸಿದರು.

Edited By : Nirmala Aralikatti
Kshetra Samachara

Kshetra Samachara

06/12/2024 10:26 pm

Cinque Terre

120

Cinque Terre

0

ಸಂಬಂಧಿತ ಸುದ್ದಿ