ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : ವಿದ್ಯಾರ್ಥಿಗಳು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಿ: ಆರ್.ಐಶ್ವರ್ಯ

ಕೊಡಗು : ವಿದ್ಯಾರ್ಥಿಗಳು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸೃಜನಶೀಲತೆ ಮತ್ತು ಕ್ರಿಯಾಶೀಲತೆ ಬೆಳೆಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸಂತ ಮೈಕಲರ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಆಟೋಟವು ಸಹ ಇರಬೇಕು. ಆದರೆ ಮೊಬೈಲ್ ನೋಡುವ ಗೀಳು ಇರಬಾರದು ಎಂದು ಸಲಹೆ ನೀಡಿದರು .

Edited By : Nirmala Aralikatti
Kshetra Samachara

Kshetra Samachara

06/12/2024 10:36 pm

Cinque Terre

580

Cinque Terre

0