ಕೊಡಗು: ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹತ್ತಿರವಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ಬಹಳ ಅರ್ಥಪೂರ್ಣವಾಗಿ ನಡೆಯಿತು.
ಮುಖ್ಯ ಅತಿಥಿಗಳಾದ ಗ್ರೂಪ್ ಕ್ಯಾಪ್ಟನ್ ಬಿ.ಎನ್.ಮನು ಭೀಮಯ್ಯ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಿದ್ರು. ಕೊಡಗು ಎಸ್ಪಿ ರಾಮರಾಜನ್, ಜಿ.ಪಂ. ಸಿಇಓ ಬನ್ವರ್ ಸಿಂಗ್ ಮೀನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಎನ್‌ಸಿಸಿ ಅಧಿಕಾರಿ ಕರ್ನಲ್ ಜೆಫಿರಿನ್ ಅರಾನ್ಹಾ ಏರ್ ಮಾರ್ಷಲ್(ನಿವೃತ್ತ) ಕೆ.ಸಿ. ಕಾರ್ಯಪ್ಪ, ಸೇರಿದಂತೆ ಮತ್ತಿತರರು ಪುಷ್ಪ ಗುಚ್ಛವಿರಿಸಿ, ಗೌರವ ನಮನ ಸಲ್ಲಿಸಿದರು. ಪೊಲೀಸ್ ಇಲಾಖೆಯಿಂದ ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆ ಸಲ್ಲಿಸಿ, ಮೌನಾಚರಿಸಲಾಯಿತು. ಮಾಜಿ ಸೈನಿಕರು, ಪೊಲೀಸರು, ಸೈನಿಕ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು, ಇತರರು ಗೌರವ ಸಲ್ಲಿಸಿದರು.
PublicNext
07/12/2024 01:08 pm