ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗಬೇಡಿ - ಚೆನ್ನಯ್ಯ ದೇವೂರ

ಶಿರಹಟ್ಟಿ : ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಇಂದು ಜಗದ್ಗುರು ಪಕ್ಕಿರೇಶ್ವರ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹಮ್ಮಿಕೊಂಡಿದ್ದ. ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಸ್ಐ ಚನ್ನಯ್ಯ ದೇವೂರ ಅವರು ಈಗಿನ ಕಾಲದಲ್ಲಿ ವಿದ್ಯಾರ್ಥಿಗಳು ವಿವಿಧ ರೀತಿಯ ದುಶ್ಚಟಗಳ ದಾಸರಾಗಿರುವುದು ವಿಷಾದಕರ ಸಂಗತಿಯಾಗಿದೆ.

ಆ ಚಟಗಳು ಮುಂದೆ ಅವರ ಜೀವನಕ್ಕೆ ಮಾರಕವಾಗುತ್ತವೆ ಆದ ಕಾರಣ ಅವುಗಳನ್ನು ಕೈ ಬಿಟ್ಟು ವಿದ್ಯಾರ್ಥಿಗಳು ಒಳ್ಳೆಯ ಜೀವನವನ್ನು ರೂಪಿಸಿಕೊಳ್ಳುವುದರ ಜೊತೆಗೆ ಇತರರಿಗೆ ಮಾದರಿಯಾಗಬೇಕು ಎಂದರು.

ಇತ್ತಿಚಿನ ದಿನಗಳಲ್ಲಿ ಸೈಬರ್ ಅಪರಾಧಗಳಿಗೆ ಒಳಗಾಗಿರುವವರು ಸಂಖ್ಯೆ ಹೆಚ್ಚಾಗಿದೆ. ಬೇರೆ ಬೇರೆ ರಾಜ್ಯ ಹಾಗೂ ದೇಶಗಳಲ್ಲಿ ಕುಳಿತುಕೊಂಡು ಈ ಸೈಬರ್ ಕ್ರೈಂ ಅನ್ನು ಮಾಡುತ್ತಿದ್ದಾರೆ. ಅಂತಹ ವಂಚನೆಗಳಿಗೆ ಒಳಗಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಜೊತೆಗೆ ಎಲ್ಲರೂ ಸಹ ಟ್ರಾಫಿಕ್ ನಿಯಮಗಳ ಬಗ್ಗೆ ಮಾಹಿತಿ ನೀಡಿ ಮತ್ತು ಅವುಗಳನ್ನು ಪಾಲನೆ ಮಾಡಬೇಕು ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಜೊತೆಗೆ ಕಾನೂನಿನ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ಈ ಸಂದರ್ಭದಲ್ಲಿ ಜಗದ್ಗುರು ಪಕ್ಕಿರೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲರಾದ ಡಾ, ಉಮೇಶ ಅರಹುಣಸಿ, ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಗಿರಿತಿಮ್ಮಣನವರ್, ಕಾಲೇಜಿನ ಪ್ರಾದ್ಯಾಪಕರು, ಪೊಲೀಸ್ ಇಲಾಖೆ ಸಿಬ್ಬಂದಿಗಳಾದ ASI ಎಸ್.ಬಿ. ಬಾರಿಗಿಡದ, ಲೋಕೇಶ್ ಲಮಾಣಿ ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

07/12/2024 03:46 pm

Cinque Terre

4.78 K

Cinque Terre

0