ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮಿಸಲಾತಿಗಾಗಿ ಆಗ್ರಹಿಸಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ಡಿ. 10 ರಂದು ನಡೆಯಲಿದೆ. ಹಾಗಾಗಿ ಇಂದು ಜಯಮೃತ್ಯುಂಜಯ್ ಶ್ರೀಗಳ ನೇತೃತ್ವದಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಗೌಪ್ಯ ಸಭೆ ನಡೆಸಲಾಗಿದೆ.
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಡಿ. 10 ರಂದು ಸುವರ್ಣಸೌಧದ ಎದುರಿಗೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಜನಪ್ರತಿನಿಧಿಗಳ ಗೌಪ್ಯ ಸಭೆ ನಡೆಸಲಾಗಿದೆ.
ಈ ಗೌಪ್ಯ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಸಿ.ಸಿ. ಪಾಟೀಲ್, ಹೆಚ್.ಎಸ್. ಶಿವಶಂಕರ್, ಮಹೇಶ ಕುಮಟಳ್ಳಿ, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಪಂಚಮಸಾಲಿ ಸಮಾಜದ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರುಗಳು ಭಾಗಿಯಾಗಿದ್ದಾರೆ.
PublicNext
07/12/2024 05:16 pm