ಮೈಸೂರು: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿ ಬಸ್ ನಿಂದ ಬಿದ್ದು ಸಾವನ್ನಪ್ಪಿದ ದುರ್ಘಟನೆ ಬೈಲುಕುಪ್ಪೆ ಬಳಿ ತಡರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ.
ತಮಿಳುನಾಡು ಮೂಲದ ದೀನ್ ದಯಾಳ್ (21) ಮೃತ ವಿದ್ಯಾರ್ಥಿಯಾಗಿದ್ದಾನೆ. ಪಿರಿಯಾಪಟ್ಟಣ ತಾಲೂಕಿನ ಗೋಲ್ಡನ್ ಟೆಂಪಲ್ ವೀಕ್ಷಿಸಲು ಹೋಗುವಾಗ ಅವಘಡ ಸಂಭವಿಸಿದೆ.
ನಿರ್ವಾಹಕನ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಡೋರ್ ಲಾಕ್ ಆಗದ ಪರಿಣಾವ ಡೋರ್‌ನಿಂದ ವಿದ್ಯಾರ್ಥಿ ಕೆಳಗೆ ಬಿದ್ದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿದ್ದ ಲೈಟ್ ಕಂಬಕ್ಕೆ ತಾಗಿ ಬಲವಾದ ಪೆಟ್ಟುಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
PublicNext
07/12/2024 07:04 pm