ಕಾರವಾರ : ನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಗೆ ಶನಿವಾರ ರಾಜ್ಯ ಪೊಲೀಸ್ ಇಲಾಖೆಯ ತರಬೇತಿ ವಿಭಾಗದ ಎಡಿಜಿಪಿ ಅಲೋಕ ಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನವೀಕರಣಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನು ಪರಿಶೀಲಿಸಿದ ಅವರು ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲೆಗೆ ಹೊಸದಾಗಿ ನೇಮಕಗೊಂಡ ಪೊಲೀಸರಿಗೆ ತಾತ್ಕಾಲಿಕವಾಗಿ ತರಬೇತಿ ನೀಡಲು, ತರಬೇತಿಗೆ ಬೇಕಾದ ಅಗತ್ಯ ಸೌಕರ್ಯಗಳು ಹಾಗೂ ಪೊಲೀಸ್ ಸುವ್ಯವಸ್ಥೆಯನ್ನು ಪರಿಶೀಲಿಸಿದರು.
PublicNext
07/12/2024 07:33 pm