ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಲ್ಲಾಪುರ: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಕ್ರೂಸರ್ ಡಿಕ್ಕಿ - ಓರ್ವ ಸಾವು, 8 ಜನರಿಗೆ ಗಾಯ

ಯಲ್ಲಾಪುರ: ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಕ್ರೂಸರ್ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಹಾಗೂ 8 ಜನರು ಗಾಯಗೊಂಡು ಘಟನೆ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ತೇಜು ಕೋಡೆ ಹಾಗೂ ಲಕ್ಷ್ಮಣ ರಾವೂರ್ ಎಂಬುವರು ಯಲ್ಲಾಪುರದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದರು. ಅವರು ಕಿರವತ್ತಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದೇ ವೇಳೆ ಯಲ್ಲಾಪುರದಿಂದ ಹುಬ್ಬಳ್ಳಿ ಕಡೆ ಅತೀ ವೇಗವಾಗಿ ಹೋಗುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಹಾಗೂ ಮೂತ್ರ ವಿಸರ್ಜಿಸುತ್ತಿದ್ದ ಸವಾರರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಕ್ರೂಸರ್ ವಾಹನದಲ್ಲಿದ್ದ ಬಾಗಲಕೋಟೆ ಜಿಲ್ಲೆ ಮುದೋಳ ತಾಲೂಕಿನ ಖಾಸಗಿ ಶಾಲೆಯ ಶಿಕ್ಷಕ 40 ವರ್ಷದ ಹನುಮಂತಪ್ಪ ಹಲಗಲಿ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರಾದ ತೇಜು ಕೋಡೆ, ಲಕ್ಷ್ಮಣ ರಾವೂರ್ ಹಾಗೂ ಕ್ರೂಸರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಸವರಾಜ ತಿಪ್ಪಣ್ಣ ಕುಂಬಾರ, ಬಸವರಾಜ ಹೂಗಾರ, ಶಾಂತವ್ವ ಬಡಿಗೇರ, ಕಾಳವ್ವ ಮಠಪತಿ, ವೆಂಕಟೇಶ ಚೌರೆಡ್ಡಿ ಹಾಗೂ ಕ್ರೂಸರ್ ಚಾಲಕ ಪ್ರಭು ಯಾದವಡ್ ಎಂಬುವರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕಳಿಸಲಾಗಿದೆ.

Edited By : PublicNext Desk
PublicNext

PublicNext

07/12/2024 09:13 pm

Cinque Terre

17.19 K

Cinque Terre

0

ಸಂಬಂಧಿತ ಸುದ್ದಿ