ಕೊಡಗು: ಕೊಡಗು ನಗರದ ಅಶ್ವಥ ಕಟ್ಟೆ, ಓಂಕಾರೇಶ್ವರ ದೇವಾಲಯ, ಕೋಟೆಮಾರಿಯಮ್ಮ ದೇವಾಲಯ ಸೇರಿದಂತೆ ಜಿಲ್ಲೆಯ ವಿವಿಧ ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ, ಮಹಾಮಂಗಳಾರತಿ ನಡೆಯಿತು.
ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಎರಡು ದಿನಗಳ ಕಾಲ ಮುಂಜಾನೆಯಿಂದ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು.
ಗಣಪತಿ ಹೋಮ, ಕಳಸ ಪೂಜೆ, ಮಹಾ ಸುದರ್ಶನ ಹೋಮ, ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷವಾಗಿ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಸೇವೆಗಳು ಹಾಗೂ ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ ನಡೆಯಿತು.
PublicNext
07/12/2024 10:32 pm