ಕೊಡಗು: ಹದಿನೆಂಟು ವರ್ಷದೊಳಗಿನ ಮಕ್ಕಳಲ್ಲಿ ಬೌದ್ಧಿಕ, ಮಾನಸಿಕ, ದೈಹಿಕ ಹಾಗೂ ಭಾಷಾ ಬೆಳವಣಿಗೆಗೆ ಹೆಚ್ಚಿನ ಅವಕಾಶವಿದ್ದು, ಈ ಬಗ್ಗೆ ಪೋಷಕರು ಮತ್ತು ಶಿಕ್ಷಕರು ಹೆಚ್ಚಿನ ಗಮನಹರಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ಸಲಹೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸರ್ಕಾರಿ ಶುಶ್ರೂಷಕರ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಶನಿವಾರ ನಡೆದ ಬಾಲನ್ಯಾಯ ಕಾಯ್ದೆ (ಮಕ್ಕಳ ಪೋಷಣೆ ಮತ್ತು ರಕ್ಷಣೆ), ಬಾಲ್ಯ ವಿವಾಹ ನಿಷೇದಿತ ಕಾಯ್ದೆ, ಪೋಕ್ಸೊ ಕಾಯ್ದೆ ಹಾಗೂ ದತ್ತು ಅಧಿನಿಯಮ ಕುರಿತು ‘ನರ್ಸಿಂಗ್ ವಿದ್ಯಾರ್ಥಿಗಳಿಗೆ ಅರಿವು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಯಸ್ಕ ಮಕ್ಕಳಲ್ಲಿ ಕಲಿಕೆಗೆ ಹೆಚ್ಚಿನ ಆಸಕ್ತಿ ಇರುತ್ತದೆ. ಜೊತೆಗೆ ಒಳ್ಳೆಯ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಯಲು ಅವಕಾಶಗಳಿದ್ದು, ಆ ನಿಟ್ಟಿನಲ್ಲಿ ಮನೆಯಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ವೆಂಕಟೇಶ್ ಕರೆ ನೀಡಿದರು.
Kshetra Samachara
07/12/2024 11:00 pm