ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: 25 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಕೆಸಿ ವೀರೇಂದ್ರ ಪಪ್ಪಿ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹಾಗೂ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ಅವರು ಭೂಮಿಪೂಜೆ ನೆರವೇರಿಸಿದರು.

ಮುಖ್ಯಮಂತ್ರಿಗಳ ವಿಶೇಷ ಅನುದಾನ ರೂ.7.50 ಕೋಟಿ ಚಿತ್ರದುರ್ಗ ನಗರಕ್ಕೆ ಮಂಜೂರಾಗಿದ್ದು, 2.5 ಕೋಟಿ ವೆಚ್ಚದ ಸಿ.ಸಿ.ರಸ್ತೆ, ಸಿ.ಸಿ.ಚರಂಡಿ, ಡೆಕ್ ಸ್ಲಾಬ್, ಒಳಚರಂಡಿ, ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ, ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ನಗರಸಭೆ ಸದಸ್ಯರಾದ ನಾಗಮ್ಮ, ಪೂಜಾ ಯೋಗಿ, ಗೀತಾ, ಚಂದ್ರಶೇಖರ್, ಮೀನಾಕ್ಷಿ, ಶಶಿಧರ್, ತಾರಕೇಶ್ವರಿ, ಗೊಪ್ಪೆ ಮಂಜುನಾಥ್ ಹಾಗೂ ನಗರಸಭೆ ನಾಮನಿರ್ದೇಶನ ಸದಸ್ಯರು ಇದ್ದರು.

Edited By : PublicNext Desk
PublicNext

PublicNext

08/12/2024 12:38 pm

Cinque Terre

18.18 K

Cinque Terre

0

ಸಂಬಂಧಿತ ಸುದ್ದಿ