ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಹಿಂದೂ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ

ಬೀದರ್: ಹಿಂದೂ ರಾಷ್ಟ್ರೀಯ ಜಾಗರಣ ಸಮಿತಿಯಿಂದ ನಗರದ ಸಾಯಿ ಶಾಲೆ ಮೈದಾನದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಹಿಂದೂ ಬೃಹತ್ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಹಿಂದೂ ಜಾಗೃತಿ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಬಿಜೆಪಿ ನಾಯಕಿ ಮಾಧವಿ ಲತಾ, ಹಿಂದೂ ನಾಯಕಿ ಕಾಜಲ್ ಹಿಂದೂಸ್ತಾನಿ ಅವರು ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸುತ್ತಿದ್ದಾರೆ. ಆದರೆ, ಈ ಮೂವರು ಪ್ರಚೋದನಕಾರಿ ಭಾಷಣ‌ ಮಾಡುತ್ತಾರೆ. ಇವರ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಯೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ.

ಜನ ಗುಂಪು ಸೇರುವುದು, ಧಾರ್ಮಿಕ ಘೋಷಣೆಗಳನ್ನು ಹಾಕುವುದರ ಮೇಲೆ ನಿರ್ಬಂಧ ಹೇರಲಾಗಿದೆ. ಈ ಆದೇಶ ಸೋಮವಾರ (ಡಿಸೆಂಬರ್ 9ರ) ಬೆಳಿಗ್ಗೆ 6ರವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲಾಡಳಿತದ ನಡೆಗೆ ಕಾರ್ಯಕ್ರಮದ ಆಯೋಜಕರು ಬೇಸರ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಜಿಲ್ಲೆಯಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿತ್ತು.

Edited By : Vijay Kumar
PublicNext

PublicNext

08/12/2024 02:13 pm

Cinque Terre

18.7 K

Cinque Terre

1

ಸಂಬಂಧಿತ ಸುದ್ದಿ