ಚಿಕ್ಕಮಗಳೂರು: ನಾಳೆಯಿಂದ ಬೆಳಗಾವಿಯಲ್ಲಿ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಜಿಲ್ಲೆಯ ಪ್ರಮುಖ ಸಮಸ್ಯೆಗಳಾದ ಕಾಡಾನೆ ಹಾವಳಿ, ಸರ್ಫೇಸಿ ಕಾಯಿದೆ ಕುರಿತು ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಚಿಕ್ಕಮಗಳೂರು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದ್ದಾರೆ.
ಕಾಡಾನೆಗಳ ಹಾವಳಿ ಕುರಿತು ಜಿಲ್ಲೆಯ ಐದು ಶಾಸಕರು ಚರ್ಚಿಸಿದ್ದು ಇದಕ್ಕೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. ಅಲ್ಲದೆ ಕಾಫಿ ಬೆಳೆಯು ಸರ್ಫೇಸಿ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲವೆಂದು ಈಗಾಗಲೇ ಕೇಂದ್ರ ಸಚಿವ ಪಿಯೂಷ್ ಗೋಯಲ್ ರವರು ತಿಳಿಸಿದ್ದರು. ಕೆಲ ಕಾಫಿ ಬೆಳೆಗಾರರಿಗೆ ಬ್ಯಾಂಕ್ ನವರು ಮತ್ತೆ ನೋಟಿಸ್ ನೀಡಿದ್ದು ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
Kshetra Samachara
08/12/2024 06:07 pm