ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದ ವೇದಿಕೆಯನ್ನು ಆರ್ಎಸ್ಎಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಜೊತೆಗೆ ಹುಬ್ಬಳ್ಳಿ ಮೂಲದ ಖ್ಯಾತ ಉದ್ಯಮಿ ಡಾ.ವಿ.ಎಸ್.ವಿ.ಪ್ರಸಾದ್ ಕೂಡಾ ಹಂಚಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಎಸ್ಎಸ್ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ವಿದ್ಯಾರ್ಥಿಗಳ ಸಾಹಸ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ನಿಧಾನವಾಗಿ ಜಾರಿಗೆ ಬರುತ್ತಿದೆ. ಶಿಕ್ಷಣ ಕೇವಲ ಹೊಟ್ಟೆ ತುಂಬಿಸಲು ಮಾತ್ರವಲ್ಲ, ಸಂಸ್ಕಾರ ಪಡೆಯಲು ಸಹ ಬೇಕು ಎಂದು ಹೇಳಿದ್ದಾರೆ.
ಎರಡು ವರ್ಷಗಳಿಂದ ಈ ಬಗ್ಗೆ ಚರ್ಚೆ, ಚಿಂತನಾ, ಮಂಥನಾ ನಡೆದು ಎಲ್ಲರ ಸಮ್ಮತಿಯೊಂದಿಗೆ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಈ ಮಾದರಿಯ ಶಿಕ್ಷಣ ಈಗಾಗಲೇ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಳಿಕ ಮಾತನಾಡಿದ ಹುಬ್ಬಳ್ಳಿಯ ಸ್ವರ್ಣ ಗೂಪ್ ಆಫ್ ಕಂಪನಿಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ.ವಿ.ಎಸ್.ವಿ.ಪ್ರಸಾದ್ ಅವರು ಮಾತನಾಡಿ, ಕಲ್ಲಡ್ಕ ವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭೆಯನ್ನು ಕಂಡು ನನ್ನ ಕಣ್ಣುತುಂಬಿ ಬಂತು. ಕಾರ್ಯಕ್ರಮದಲ್ಲಿ RSS ಸರಸಂಘ ಚಾಲಕ್ ಡಾ.ಮೋಹನ್ ಭಾಗವತ್‌ರೊಂದಿಗೆ ವೇದಿಕೆ ಹಂಚಿಕೊಂಡಿರುವುದು ನನ್ನ ಸುದೈವ ಎಂದು ಹೇಳಿದರು.
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಂದಾಳತ್ವದ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರದಿಂದ ಸುಮಾರು ಮೂರುವರೆ ದಶಕದಿಂದ ಕ್ರೀಡೋತ್ಸವ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ. ಶ್ರೀರಾಮನ ವಿಗ್ರಹಕ್ಕೆ ಹಾಲಿನ ಅಭಿಷೇಕ ಮಾಡುವ ಮೂಲಕ ಕ್ರಿಡೋತ್ಸವ ಉದ್ಘಾಟನೆ ಮಾಡಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
08/12/2024 09:51 pm