ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಷಷ್ಟಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಪಲ್ಲಕಿ ಉತ್ಸವ, ಕೆರೆ ದೀಪೋತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಮಧುಸೂದನ್ ಆಚಾರ್ಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಕವಾಟೋದ್ಘಾಟನೆ, ತುಲಾಭಾರ ಸೇವೆ ನಡೆಯಿತು.
ಮಧ್ಯಾಹ್ನ ಶ್ರೀ ದೇವರ ಮಹಾಪೂಜೆ, ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಯಾತ್ರಾ ಬಲಿ, ಓಕುಳಿ, ಪಲ್ಲಕ್ಕಿ ಉತ್ಸವ, ಕೆರೆ ದೀಪೋತ್ಸವ, ಶ್ರೀ ದೇವರ ಮಹಾ ರಥೋತ್ಸವ ನಡೆಯಿತು.
ಈ ಸಂದರ್ಭ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗುರುರಾಜ್ ಎಸ್ ಪೂಜಾರಿ, ಸದಸ್ಯರಾದ ಪುರುಷೋತ್ತಮ ಕೋಟ್ಯಾನ್, ಸಂಪತ್ ಕುಮಾರ್ ಶೆಟ್ಟಿ ತೋಕೂರು ಗುತ್ತು, ಸವಿತಾ ಶರತ್ ಬೆಳ್ಳಾಯರು, ಅಶೋಕ್ ಕುಂದರ್, ವಿಶ್ವನಾಥ, ಭಾಸ್ಕರ ದೇವಾಡಿಗ, ಶೋಭಾ ವಿ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
PublicNext
09/12/2024 08:47 am