ಬೈಂದೂರು: ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ : ಧನ್ವಿ ಮರವಂತೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಆಯ್ಕೆ
ಬೈಂದೂರು: ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶ ನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ.ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
09/12/2024 08:57 am