ಮುಲ್ಕಿ:ಕಿಲ್ಪಾಡಿ ಗ್ರಾಮ ಪಂಚಾಯತ್ ನ 202324ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ಸೋಮವಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು
ಸಭೆಯ ಅಧ್ಯಕ್ಷತೆಯನ್ನು ನೋಡಲ್ ಅಧಿಕಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನೊ ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಧನಲಕ್ಷ್ಮಿ, ಮಾತನಾಡಿ ಕಿಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ನಿಧಿಯನ್ನು ಸಮರ್ಪಕವಾಗಿ ಬಳಸಿ ಪಾರದರ್ಶಕವಾಗಿ ಕಾಮಗಾರಿಗಳು ನಡೆದಿದ್ದು ಮಾದರಿ ಪಂಚಾಯಿತಿಯಾಗಿದೆ ಎಂದರು
ಸಭೆಯಲ್ಲಿ ಗ್ರಾಮಸ್ಥರಾದ ಫಯಾಜ್ ಶೇಖ್ ಕೆ ಕೆ ಮಾತನಾಡಿ ಪಂಚಾಯತ್ ವ್ಯಾಪ್ತಿಯ ಮಹರ್ಷಿಶಾಲೆ ಬಳಿ ರಸ್ತೆ ಹಾಗೂ ಚರಂಡಿ ಅವ್ಯವಸ್ಥೆಯಿಂದ ಕೂಡಿದ್ದು ಹೇಳಿ ಹೇಳಿ ಸಾಕಾಗಿದೆ. ಯಾವುದೇ ರಾಜಕೀಯ ಮಾಡದೆ ರಸ್ತೆ ದುರಸ್ತಿಗೊಳಿಸಿ, ದಾರಿದೀಪ ಅವ್ಯವಸ್ಥೆ ಸರಿಪಡಿಸಿ, ಜನರಿಗೆ ಮೂಲಭೂತ ಸೌಕರ್ಯ ಒದಗಿಸಿ ಎಂದು ಆಗ್ರಹಿಸಿದರು
ಇದಕ್ಕೆ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ ಮಾತನಾಡಿ ಪಂಚಾಯತ್ನಲ್ಲಿ ಅನುದಾನದ ಕೊರತೆ ಇದ್ದು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಡಿಸುವ ಭರವಸೆ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಮಾತನಾಡಿ ಮುಂದಿನ ವರ್ಷದ ಕಾಮಗಾರಿಗಳಿಗೆ ಸದ್ಯದಲ್ಲಿ ಗ್ರಾಮಸಭೆ ನಡೆಸಲಿದ್ದು ಗ್ರಾಮಸ್ಥರು ಪೂರ್ವಭಾವಿಯಾಗಿ ಕಾಮಗಾರಿಗಳನ್ನು ಅಗತ್ಯವಾಗಿ ನೋಂದಾಯಿಸಬೇಕು ಇಂದು ಮನವಿ ಮಾಡಿದರು
ನರೇಗಾ ಇಂಜಿನಿಯರ್ ರಿತೇಶ್ ಉಪಸ್ಥಿತರಿದ್ದರು. ಗ್ರಾಮ ಸಂಪನ್ಮೂಲ ವ್ಯಕ್ತಿ ರೇಖಾಮಣಿ ನಿರೂಪಿಸಿದರು
Kshetra Samachara
09/12/2024 02:43 pm