ಬೆಳಗಾವಿ: ಮ್ಯಾನೇಜ್ಮೆಂಟ್ ಕೋಟಾ ಅಡಿಯಲ್ಲಿ ಪ್ರವೇಶಾತಿ ಪಡೆದುಕೊಂಡಿರುವ ಎಸ್ ಸಿ, ಎಸ್ ಟಿ ಹಾಗೂ ಓ ಬಿ ಸಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ವಸತಿ ನಿಲಯಗಳಲ್ಲಿ ಮೀಸಲಾತಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವ ಆದೇಶವನ್ನು ಹಿಂಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ಇಂದು ಸುವರ್ಣಸೌಧದ ಬಳಿ ಇರುವ ಸುವರ್ಣ ಗಾರ್ಡನ್ ಬಳಿ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಲಾಯಿತು.
ಭಾರತ ಸರ್ಕಾರ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಮಾರ್ಗಸೂಚಿ 2020-21 ರಿಂದ 2025- 26 ರ ಮಾರ್ಗಸೂಚಿಯಂತೆ ವಿದ್ಯಾರ್ಥಿ ವೇತನ ಮಂಜೂರಾತಿಗೆ ಸಂಬಂಧಪಟ್ಟಂತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳು ಮ್ಯಾನೇಜೆಂಟ್ ಕೋಟಾ ಅಡಿಯಲ್ಲಿ ಪ್ರವೇಶಾತಿ ಪಡೆದುಕೊಂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ವಸತಿ ನಿಲಯಗಳಲ್ಲಿ ಮೀಸಲಾತಿಯನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದೆ. ಹಾಗಾಗಿ ಈ ನಿಯಮವನ್ನು ರಾಜ್ಯ ಸರ್ಕಾರ ರದ್ದುಪಡಿಸಬೇಕು ಎಂದು ಆಗ್ರಹಿಸಲಾಯಿತು.
PublicNext
09/12/2024 03:06 pm