ನವಲಗುಂದ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಕೇವಲ ರಾಜಕೀಯಕ್ಕೆ ಬಳಸಿಕೊಂಡಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆರೋಪಿಸಿದರು.
ಪಟ್ಟಣದಲ್ಲಿರುವ ರೈತ ಹುತಾತ್ಮ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಈ ಭಾಗದಲ್ಲಿ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟಗಾರರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ ಕೇಂದ್ರ ಹಾಗೂ ರಾಜ್ಯ ಎರಡು ಸರಕಾರಗಳ ಅದನ್ನು ರಾಜಕೀಯವಾಗಿ ಬಳಕೆ ಮಾಡಿಕೊಂಡಿವೆ. ಕೃಷ್ಣಾ ಮತ್ತು ಮಹದಾಯಿ ವಿಷಯದಲ್ಲಿ ಬಿಜೆಪಿಗರು ಬರಿ ನ್ಯಾಯಾಲಯದ ನೆಪ ಹೇಳಿ ಈ ಭಾಗದ ರೈತರಿಗೆ ಅನ್ಯಾಯ ವೆಸಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಮಹದಾಯಿಗೆ ಸಂಬಂಧಿಸಿದಂತೆ ಮೂರೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಕಾವೇರಿ ವಿಷಯದಲ್ಲಿ ಕೈಗೊಂಡ ನಿರ್ಣಯದಂತೆ ಇಲ್ಲಿಯೂ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನವಲಗುಂದ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಿರಾಜುದ್ದೀನ್ ಧಾರವಾಡ, ಬಿ ನರಸಪ್ಪ, ಹಣಮಂತಣ್ಣ ಮೇಟಿ, ರೈಮಾನ ಹೋಳಿ, ಸಚೀನ ಗಾಣಿಗೇರ, ಸಾಗರ ಗಾಯಕವಾಡ, ಇಮ್ಮಿಯಾಜ ಜಮಖಾನ, ಮಮ್ಮದ್ ಮಾಟಿಗಾರ, ರಿಯಾಜ ನಾಶಿಪುಡಿ, ಅನ್ವರ್ ಮುಲಿಮಣಿ ಸೇರಿದಂತೆ ಕನ್ನಡ ಪರ ಹೋರಾಟಗಾರರು ಇದ್ದರು.
Kshetra Samachara
09/12/2024 03:07 pm