ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ಜೂಜಾಟದ ಅಡ್ಡೆ ಆಯಿತೇ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹ

ಬೆಳಗಾವಿ : ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಕೈದಿಗಳು ಗಾಂಜಾ, ಸಿಗರೇಟ್, ಬಿಯರ್ ಕುಡಿಯುತ್ತಾ ಇಸ್ಪೀಟ್ ಆಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದೆ.

ಜೈಲಿನ ಸರ್ಕಲ್ ನಂಬರ್ 2ರ ಎರಡನೇ ಬ್ಯಾರಕ್‌ನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು ರಾಜಾರೋಷವಾಗಿ ಹಣವಿಟ್ಟು ಇಸ್ಪೀಟ್ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಜೈಲಿನಲ್ಲಿ ಹಣ ಕೊಟ್ಟರೆ ಕೈದಿಗಳಿಗೆ 20 ಸಾವಿರ ರೂ. ಬೆಲೆಯ ಆಂಡ್ರಾಯ್ಡ್ ಮೊಬೈಲ್ ಕೂಡ ಸಿಗುತ್ತದೆ ಎನ್ನಲಾಗುತ್ತದೆ. ಜೈಲು ಅಧೀಕ್ಷಕ ಕೃಷ್ಣಮೂರ್ತಿ ಈ ಎಲ್ಲಾ ವ್ಯವಸ್ಥೆ ಮಾಡ್ತಾರೆ ಎಂಬ ಆರೋಪ ಕೇಳಿಬಂದಿದೆ.

ನೆಲಮಂಗಲ ಮೂಲದ ಮುಬಾರಕ್ ಎಂಬ ಕೈದಿ ಇಸ್ಪೀಟ್ ಆಡುವ ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಈ ವಿಡಿಯೋದಲ್ಲಿ ಬೆಳಗಾವಿಯ ಕೈದಿ ಸುರೇಶ್, ಶಾಹಿದ್ ಖುರೇಶಿ, ಆನಂದ್ ನಾಯಕ್ ಸೇರಿ ಹಲವರು ಇದ್ದಾರೆ.

Edited By : Nagesh Gaonkar
PublicNext

PublicNext

09/12/2024 03:45 pm

Cinque Terre

23.54 K

Cinque Terre

3

ಸಂಬಂಧಿತ ಸುದ್ದಿ