ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತ ಮುಖಂಡರು‌ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಶ್ರೀನಿವಾಸಪುರ: ರೈತ ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಮುಂದೆ ನಡೆದಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಭೂಮಿ ಒತ್ತುವರಿ ತೆರವಿಗೆ ರೈತ ಸಂಘ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತ ಸಂಘದ ಮುಖಂಡರ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನುಕಾಟ ತಲ್ಲಾಟವಾಗಿದೆ.‌ ರೈತ ಸಂಘದ ನಾರಾಯಣಗೌಡ, ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆಯನ್ನು ಹಮ್ಮಿಳಲಾಗಿತ್ತು. ಈ ವೇಳೆ ರಮೇಶ್ ಕುಮಾರ್ ಭಾವಚಿತ್ರ ಇಟ್ಟಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿ ರೈತ ಸಂಘದ ಮುಖಂಡರು ಹಾಗೂ ರಮೇಶ್ ಕುಮಾರ್ ಬೆಂಬಲಿಗರ ನಡುವೆ ತಲ್ಲಾಟ ನೂಕಾಟವಾಯಿತು. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : PublicNext Desk
PublicNext

PublicNext

09/12/2024 03:48 pm

Cinque Terre

4.72 K

Cinque Terre

0

ಸಂಬಂಧಿತ ಸುದ್ದಿ