ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ನಿಷೇಧದ ನಡುವೆಯೂ ಮಹಾಮೇಳಾವ್ ಆಚರಣೆ, ಎಂಇಎಸ್ ಪುಂಡರನ್ನು ವಶಕ್ಕೆ ಪಡೆದ ಪೊಲೀಸ್ರು

ಬೆಳಗಾವಿ: ಅಧಿವೇಶನದ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸ್ರು ಅರೆಸ್ಟ್ ಮಾಡಿದ್ದಾರೆ.

ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಾಡದ್ರೋಹಿ ಎಂಇಎಸ್ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಯೋಜನೆ ಮಾಡುತ್ತದೆ.‌ ಈ ಬಾರಿಯು ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ. ಹಾಗಾಗಿ ಜಿಲ್ಲಾಡಳಿತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧ ಹೇರಿತು. ಆದರೆ ಜಿಲ್ಲಾಡಳಿತ ನಿಷೇಧ ಹೇರಿದರೂ ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿ ಮಹಾಮೇಳಾವ್ ಆಚರಣೆಗೆ ಮುಂದಾಗಿದೆ. ಈ ವೇಳೆ ಪೊಲೀಸ್ರು ವಶಕ್ಕೆ ಪಡೆದಿದ್ದಾರೆ.‌

ಬೆಳಗಾವಿ ನಗರದ ಸಂಭಾಜಿ ವೃತ್ತದ ಬಳಿ 20 ಕ್ಕೂ ಹೆಚ್ಚು ಎಂಇಎಸ್ ಪುಂಡರನ್ನು ಅರೆಸ್ಟ್ ಮಾಡಲಾಗಿದೆ.‌ ಎಂಇಎಸ್ ನಾಯಕರಾದ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಕಾಳೆ ಸೇರಿ 20ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.‌ ಎಂಇಎಸ್ ಮಹಾಮೇಳಾವ್ ಹಿನ್ನೆಲೆ ಬೆಳಗಾವಿ‌ ನಗರದಲ್ಲಿ ಬಿಗಿ ಖಾಕಿ ಸರ್ಪಗಾವಲು ಹಾಕಲಾಗಿತ್ತು. ನಗರದ ಮೂರು ಮೈದಾನ, ಒಂದು ವೃತ್ತದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

Edited By : Suman K
PublicNext

PublicNext

09/12/2024 04:10 pm

Cinque Terre

13.2 K

Cinque Terre

2

ಸಂಬಂಧಿತ ಸುದ್ದಿ