ಹಾಸನ: ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದ್ದು, ತಪ್ಪಿಸಿಕೊಳ್ಳುವ ವೇಳೆ ಬಿದ್ದು ನಾಲ್ವರಿಗೆ ಗಾಯಗಳಾಗಿರವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಇಂದು ನಡೆದಿದೆ.
ಬಿಕ್ಕೋಡು ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದ್ದು, ಏಸ್ಟೇಟ್ ಗೆ ಕೆಲಸಕ್ಕೆ ಬಂದಿದ್ದ ವೇಳೆ ಏಕಾಏಕಿ ಒಂಟಿ ಕಾಡಾನೆ ದಾಳಿ ಮಾಡಿದೆ. ಬೀಟಮ್ಮ ಗ್ಯಾಂಗ್‌ನಿಂದ ಬೇರ್ಪಟ್ಟಿದ್ದ ಕಾಡಾನೆ ಇದಾಗಿದ್ದು, ಕೂದಲೆಳೆ ಅಂತರದಲ್ಲಿ ಕಾರ್ಮಿಕರು ಪಾರಾಗಿದ್ದಾರೆ.
ಕೂಡಲೇ ಕೆಲಸ ನಿಲ್ಲಿಸಿ ಹೊರಬಂದ ಕಾರ್ಮಿಕರು ತೊಟದ ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗಾಯಗೊಂಡ ಕಾರ್ಮಿಕರನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
PublicNext
09/12/2024 04:19 pm