ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಜಂತು ಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಕೊಡಗು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಹಕಾರದಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆಯಲ್ಲಿ ಚಾಲನೆ ದೊರೆಯಿತು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ ಅವರು 1-19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆಯನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಶಾಲಾ ಮಕ್ಕಳ ಆರೋಗ್ಯ ಕಾರ್ಯಕ್ರಮದಲ್ಲಿ ಸರ್ಕಾರವು ಜಂತುಹುಳು ನಿವಾರಣಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಇಲಾಖೆ ವತಿಯಿಂದ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ಜಂತುಹುಳು ನಿವಾರಣಾ ಮಾತ್ರೆಯನ್ನು 19 ವರ್ಷದೊಳಗಿನ ಮಕ್ಕಳು ಪಡೆದುಕೊಳ್ಳಬೇಕು. ಇದರಿಂದ ಹೊಟ್ಟೆನೋವು ಕಡಿಮೆಯಾಗುತ್ತದೆ. ಜೊತೆಗೆ ಜೀರ್ಣಶಕ್ತಿ ಹೆಚ್ಚಿಸುತ್ತದೆ. ಹಾಗೆಯೇ ರಕ್ತಹೀನತೆ ತಡೆಯಬಹುದು ಎಂದು ಹೇಳಿದರು.

Edited By : Vijay Kumar
PublicNext

PublicNext

09/12/2024 06:09 pm

Cinque Terre

11.74 K

Cinque Terre

0

ಸಂಬಂಧಿತ ಸುದ್ದಿ