ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಲಹೊಂಗಲ: ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲು ಆಗ್ರಹ

ಬೈಲಹೊಂಗಲ: ಬಾಂಗ್ಲಾ ದೇಶದಲ್ಲಿ ಸ್ವಾಮೀಜಿಗಳ ಬಂಧನ ಹಾಗೂ ಹಿಂದೂಗಳ ಮೇಲಿನ ದೌರ್ಜನ್ಯ ತಡೆಗೆ ಒತ್ತಾಯಿಸಿ ವಿಶ್ವಹಿಂದು ಪರಿಷದ್, ಬಜರಂಗದಳ ತಾಲ್ಲೂಕು ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು.

ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಬಾಂಗ್ಲಾ ಸರ್ಕಾರ ವಿರುದ್ಧ ದಿಕ್ಕಾರ ಕೂಗಿದರು. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ಪದೇ, ಪದೇ ದೌರ್ಜನ್ಯ ಎಸಗುತ್ತಿರುವ ಸಕರ್ಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾ ಸರ್ಕಾರ ವಿರುದ್ಧ ಘೋಷಣಾ ಫಲಕಗಳನ್ನು ಕೈಯಲ್ಲಿ ಹಿಡಿದು ಪ್ರತಿಭಟನಾ ಮೆರವಣಿಗೆ ತೆರಳಿದರು. ಮೆರವಣಿಗೆಯುದ್ದಕ್ಕೂ ಬಾಂಗ್ಲಾ ವಿರುದ್ಧ ಘೋಷಣೆ ಮೊಳಗಿಸಿದರು.

ವಿಶ್ವಹಿಂದು ಪರಿಷದ್ ಜಿಲ್ಲಾ ಘಟಕ ಅಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ, ತಾಲ್ಲೂಕು ಘಟಕ ಅಧ್ಯಕ್ಷ ಕಾಶಿನಾಥ ಬಿರಾದಾರ ನೇತೃತ್ವವಹಿಸಿ ಮಾತನಾಡಿ, 'ಬಾಂಗ್ಲಾ ದೇಶದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳ ಕಾರಣಗಳಿಂದ ಆಡಳಿತ ವ್ಯವಸ್ಥೆ ಕುಸಿದಿದೆ. ಆ ಪರಿಣಾಮ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ, ದಾಳಿಗಳನ್ನು ಮೇಲಿಂದ ಮೇಲೆ ನಡೆಸಲಾಗುತ್ತಿದೆ. ಹಿಂದೂಗಳ ಆಸ್ತಿಗಳನ್ನು ಗುರಿ ಮಾಡಿ ಹಾನಿ ಮಾಡಲಾಗುತ್ತಿದೆ. ಬಾಂಗ್ಲಾ ಇಸ್ಕಾನ್ ಸಂಸ್ಥೆಯ ಚಿನ್ಮಯ ಕೃಷ್ಣದಾಸಪ್ರಭು ಸ್ವಾಮೀಜಿ ಅವರನ್ನು ಹಾಗೂ ಅವರ ಅನುಯಾಯಿಗಳನ್ನು, ಹಿಂದೂ ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ.

ಬಾಂಗ್ಲಾದಲ್ಲಿ ಅಲ್ಪ ಸಂಖ್ಯಾತರಾಗಿರುವ ಹಿಂದೂಗಳ ಮನೆಗಳ ಮೇಲೆ ದಾಳಿ, ಅತ್ಯಾಚಾರ ಕೃತ್ಯಗಳು ವಿಪರಿತಗೊಂಡಿವೆ. ಹಿಂದೂ ದೇವಾಲಯ, ಆಶ್ರಮಗಳ ಮೇಲೆ ಜಿಹಾದಿ ದುರಾಡಳಿತದ ಇಬ್ಬಗೆ ನೀತಿ ಖಂಡನೀಯ. ಕೂಡಲೇ ಬಾಂಗ್ಲಾ ದೇಶದಲ್ಲಿರುವ ಹಿಂದೂಗಳ ಪ್ರಾಣ, ಮಾನ, ಆಸ್ತಿ ರಕ್ಷಣೆಗೆ ಕೇಂದ್ರ ಸಕರ್ಾರ ಮುಂದಾಗಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಮದ್ಯ ಪ್ರವೇಶಿಸಿ ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ವಿಶ್ವ ಹಿಂದೂ ಪರಿಷತ್,ಬಜರಂಗದಳ ಕಾರ್ಯಕರ್ತರು ಹಾಗೂ ಹನುಮಮಾಲಾಧಾರಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

09/12/2024 06:15 pm

Cinque Terre

7.02 K

Cinque Terre

0

ಸಂಬಂಧಿತ ಸುದ್ದಿ