ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ: ಯುವ ಮತದಾರರ ಮಿಂಚಿನ ನೋಂದಣಿ ಅಭಿಯಾನ

ಕೋಲಾರ: ಕೋಲಾರ ಜಿಲ್ಲೆಯಲ್ಲಿರುವ ಅರ್ಹ ಯುವ ಮತದಾರರನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸುವ ಉದ್ದೇಶದಿಂದ ಮುಂದಿನ 3 ದಿನಗಳು ಮತದಾರರ ಮಿಂಚಿನ ನೋಂದಣಿ ಅಭಿಯಾನವನ್ನು ಜಿಲ್ಲಾದ್ಯಂತ ಆಯೋಜಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅಕ್ರಂ ಪಾಷ ಅವರು ಜಿಲ್ಲೆಯ ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಂದ ಮಿಂಚಿನ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು ಎಂದರು.

ಪ್ರಚಾರ ನಡೆಸಿ ಮಿಂಚಿನ ನೋಂದಣಿ ಅಭಿ ಯಾನಕ್ಕೆ ಅಗತ್ಯ ಇರುವ ಎಲ್ಲಾ ನಮೂನೆಗಳನ್ನು ಮತಗಟ್ಟೆ ಅಧಿಕಾರಿಗಳಿಗೆ ಸರಬರಾಜು ಮಾಡಲಾಗುವುದು. ಆಯಾ ತಹಶೀಲ್ದಾರರು ಪೂರ್ವಭಾವಿಯಾಗಿ ತಾಲೂಕಿನಲ್ಲಿ ವ್ಯಾಪಕ ಪ್ರಚಾರ ನಡೆಸಬೇಕೆಂದು ತಿಳಿಸಿದರು.

Edited By : PublicNext Desk
PublicNext

PublicNext

09/12/2024 06:35 pm

Cinque Terre

7.8 K

Cinque Terre

0

ಸಂಬಂಧಿತ ಸುದ್ದಿ