ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನ

ಕೊಡಗು: ನಗರದ ಖಾಸಗಿ ಹೋಟೆಲ್‍ನಲ್ಲಿ ಬಾಬಾ ಸಾಹೇಬ್ ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಅವರ 68 ನೇ ಪರಿ ನಿರ್ವಾಣ ದಿನ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮಕ್ಕೆ ಮಡಿಕೇರಿ ಶಾಸಕರಾದ ಡಾ.ಮಂತರ್‍ಗೌಡ ಅವರು ಭಾಗವಹಿಸಿ ಅಧ್ಯಕ್ಷತೆ ವಹಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆಪುಷ್ಪ ನಮನವನ್ನು ಸಲ್ಲಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಂಬೇಡ್ಕರ್ ಅವರನ್ನು ಉದ್ದೇಶಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ಒಂದು ಜನಾಂಗಕ್ಕೆ ಸೀಮಿತವಲ್ಲ. ಮಹಿಳೆಯರಿಗೆ ಶಿಕ್ಷಣ ನೀಡಿ ಸಮಾನತೆಗೆ ಹೆಚ್ಚು ಒತ್ತು ನೀಡಿದ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಎಫ್‍ಎಂಸಿ ಕಾಲೇಜಿನ ಪ್ರೊ. ಡಾ.ತಿಪ್ಪೇಸ್ವಾಮಿ ಹಾಗೂ ಮಹಮದ್ ಮುಸ್ತಫ ಅವರು ಭಾಗವಹಿಸಿ ಬಾಬಾ ಸಾಹೇಬರ ಹಿತವಚನಗಳ ವಿಷಯವನ್ನು ಜನರಿಗೆ ತಿಳಿಸಿದರು.

Edited By : Abhishek Kamoji
Kshetra Samachara

Kshetra Samachara

09/12/2024 06:39 pm

Cinque Terre

640

Cinque Terre

0

ಸಂಬಂಧಿತ ಸುದ್ದಿ