ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಬೈಕ್ - ಗ್ಯಾಸ್ ಸಾಗಾಟ ವಾಹನ ಡಿಕ್ಕಿ - ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಕುಂದಾಪುರ: ಬೈಕ್ ಒಂದು ಗ್ಯಾಸ್ ಸಾಗಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಬಲಿಯಾದ ಬೈಕ್ ಸವಾರನನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬುವರ ಪುತ್ರ ರಂಜಿತ್ ಬಲ್ಲಾಳ್(59) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ಸುಮಾರು 4:00 ಕ್ಕೆ ಅಪಘಾತ ನಡೆದಿದ್ದು ಬೈಕ್ ಸವಾರ ರಂಜಿತ್ ಬಲ್ಲಾಳ್ ತನ್ನ ಬಿ ಎಂ ಡಬ್ಲ್ಯೂ ಬೈಕ್ ನಲ್ಲಿ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆರಾಟೆ ಸೇತುವೆ ದುರಸ್ತಿಗಾಗಿ ಕಳೆದ ಎರಡು ವಾರಗಳಿಂದ ವ್ಯವಸ್ಥೆ ಮಾಡಿದ್ದು ಈ ಸ್ಥಳ ಅಪಾಯಕಾರಿ ಸ್ಥಳವಾಗಿ ಪರಿಣಮಿಸಿದೆ.

ವೇಗವಾಗಿ ಬಂದ ಬೈಕ್ ಸವಾರ ಹೆಲ್ಮೆಟ್ ಧರಿಸಿದ್ದರೂ ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರ ಸಹಕಾರದಿಂದ ಬೈಕ್ ಸವಾರನನ್ನು ಗಂಗೊಳ್ಳಿ ಆಪದ್ಬಾಂಧವ ಇಬ್ರಾಹಿಂ ಗಂಗೊಳ್ಳಿ ಮತ್ತು ಅಬ್ರರ್ ತನ್ನ ಆಂಬ್ಯುಲೆನ್ಸ್ ನಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಳೆದ ಒಂದು ವರ್ಷದಿಂದ ಸಂಪೂರ್ಣ ಅವ್ಯವಸ್ಥೆ ಪರಿಣಾಮ ಹಲವು ಅಪಘಾತಗಳು ಸಂಭವಿಸಿವೆ. ಆದರೆ ಈ ಬಗ್ಗೆ ಎಚ್ಚೆತ್ತುಕೊಳ್ಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕಾಮಗಾರಿ ನಡೆಸಿದ ಐಆರ್‌ಬಿ ಸಂಸ್ಥೆಯು ತನ್ನ ನಿರ್ಲಕ್ಷ್ಯ ಧೋರಣೆಯನ್ನು ತೋರುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By : Shivu K
PublicNext

PublicNext

09/12/2024 07:08 pm

Cinque Terre

19.85 K

Cinque Terre

0

ಸಂಬಂಧಿತ ಸುದ್ದಿ