ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣೆ ಕಾರ್ಯಕ್ರಮ

ಮೊಳಕಾಲ್ಮುರು: ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಷ್ಟ್ರೀಯ ಜಂತು ಹುಳ ನಿವಾರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾಲೂಕು ಆರೋಗ್ಯಧಿಕಾರಿಗಳಾದ ಡಾ. ಮಧುಕುಮಾರ್ ಮಾತನಾಡಿ,ಮಕ್ಕಳನ್ನು ಅತಿಯಾಗಿ ಕಾಡುವಂತಹ ಜಂತುಹುಳುವಿನ ಸಮಸ್ಯೆಯನ್ನು ನಿವಾರಿಸಲು ಇಂದಿನ ದಿನಗಳಲ್ಲಿ ಸರಕಾರವು ಹಲವಾರು ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆಯಾದರು,ಈ ಹುಳಗಳು ಮಕ್ಕಳನ್ನು ಕಾಡುತ್ತಿರುವುದು ಸುಳ್ಳಲ್ಲ. ಜಂತು ಹುಳು ಇರುವಂತಹ ಮಕ್ಕಳಲ್ಲಿ ಪೋಷಕಾಂಶದ ಕೊರತೆಯು ಉಂಟಾಗಿ ಅದು ಅವರ ಬೆಳವಣಿಗೆ ಮೇಲೆ ಪರಿಣಾಮ ಬೀರುವುದು.'ಹೊಟ್ಟೆಯಲ್ಲಿ ಜಂತು ಹುಳು ಆಗಿದ್ದರೆ ಮಕ್ಕಳಲ್ಲಿ ರಕ್ತ ಹೀನತೆ, ಪೌಷ್ಟಿಕಾಂಶ ಕೊರತೆ, ನಿಶ್ಯಕ್ತಿ, ಹಸಿವು ಆಗದಿರುವುದು, ಹೊಟ್ಟೆ ನೋವು ಕಂಡು ಬರುತ್ತದೆ. ಇದನ್ನು ನಿರ್ವಹಿಸುವುದಕ್ಕಾಗಿ 1ರಿಂದ 19 ವರ್ಷದ ಎಲ್ಲ ಮಕ್ಕಳಿಗೂ ಶಾಲೆಗಳಲ್ಲಿ ಉಚಿತವಾಗಿ ಜಂತು ನಿವಾರಕ ಮಾತ್ರೆಗಳನ್ನು ನೀಡಲಾಗುತ್ತದೆ. ಇದರ ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿಗಳು ಆರೋಗ್ಯ ಕಾಪಾಡಿಕೊಳ್ಳಬೇಕು' ಎಂದರು.

Edited By : PublicNext Desk
Kshetra Samachara

Kshetra Samachara

09/12/2024 07:53 pm

Cinque Terre

1.7 K

Cinque Terre

0

ಸಂಬಂಧಿತ ಸುದ್ದಿ