ಕೊಡಗು: ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ಸಮೂಹದ ಅಭ್ಯುದಯದ ಕುರಿತು ನೀಡಿದ್ದ ಭರವಸೆಗಳನ್ನು ಅಧಿಕಾರಕ್ಕೇರಿದ ನಂತರ ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ಕೇವಲ ಮೌಖಿಕ ಹೇಳಿಕೆಗಳಿಗಷ್ಟೇ ಸರ್ಕಾರ ಸೀಮಿತವಾಗಿದೆ ಎಂದು ಆರೋಪಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಈ ಸಂಬಂಧ ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಡಿ.10 ರಂದು ಉಡುಪಿಯಿಂದ ‘ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ'ವನ್ನು ಆಯೋಜಿಸಲಾಗಿದೆ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರದಿಂದ ಆರಂಭಗೊಳ್ಳುವ ಜಾಥಾ ಆರು ದಿನಗಳ ಕಾಲ ಸಾಗಿ ಬೆಳಗಾವಿಯಲ್ಲಿ ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಸರ್ಕಾರದ ಮುಂದೆ ನಮ್ಮ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದರು.
Kshetra Samachara
09/12/2024 08:25 pm