ಹುಬ್ಬಳ್ಳಿ: ಬಾಡಿ ಬಿಲ್ಡಿಂಗ್ ಎಂಬುವುದು ನಿಜಕ್ಕೂ ಯುವ ಸಮುದಾಯದಲ್ಲಿ ಹುಮ್ಮಸ್ಸು ತುಂಬುವ ಸ್ಪರ್ಧೆಯಾಗಿದೆ. ಆದರೆ ಇಂತಹದೊಂದು ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ವಿಶಾಲ ಸಾಂಬ್ರಾಣಿಯವರು ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಧಾರವಾಡ ಜಿಲ್ಲೆಯ ಬಾಡಿ ಬಿಲ್ಡಿಂಗ್ ಅಸೋಸಿಯೇಷನ್‌ನಲ್ಲಿ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಯುವ ಮುಖಂಡ ವರುಣ ಸಾಂಬ್ರಾಣಿಯವರ ಸಹೋದರ ವಿಶಾಲ ಸಾಂಬ್ರಾಣಿಯವರು, 60 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ರವಿವಾರ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನದ ಮೂಲಕ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಸತತ ಪರಿಶ್ರಮದಿಂದ ವಿಶಾಲ ಸಾಂಬ್ರಾಣಿಯವರು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 60 ಕೆಜಿ ವಿಭಾಗದಲ್ಲಿ ಪ್ರತಿಸ್ಪರ್ಧಿಗಳನ್ನು ಹಿಮ್ಮೆಟ್ಟಿಸಿ ಮೊದಲ ಸ್ಥಾನ ಪಡೆದಿದ್ದು, ಈಗ ರಾಜ್ಯಮಟ್ಟದಲ್ಲಿ ಸಂಚಲನ ಸೃಷ್ಟಿಸಲು ಸನ್ನದ್ಧರಾಗಿದ್ದಾರೆ. ಅಲ್ಲದೇ Mr.DHARWAD-2024 ಅವಾರ್ಡ್ ಗೆ ಭಾಜನರಾಗಿದ್ದು, ಇವರ ಸಾಧನೆಯನ್ನು ಸಾರ್ವಜನಿಕರು ಪ್ರಶಂಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/12/2024 10:09 pm