ಕೊಡಗು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಡಗು ಜಿಲ್ಲಾ ಶಾಖೆಗೆ ಮಡಿಕೇರಿಯಲ್ಲಿ ಮಂಜೂರಾಗಿರುವ 40 ಸೆಂಟ್ಸ್ ಜಾಗದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುವುದು ಎಂದು ಸಂಘದ ನೂತನ ಜಿಲ್ಲಾಧ್ಯಕ್ಷ ಮುಕ್ಕಾಟಿರ ಸಿ.ಅರುಣ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ 40 ಸೆಂಟ್ಸ್ ಜಾಗವನ್ನು ಹಿಂದಿನ ಜಿಲ್ಲಾಧಿಕಾರಿಗಳು ಮಂಜೂರು ಮಾಡಿದ್ದಾರೆ. ಈ ಜಾಗದಲ್ಲಿ ಸುಮಾರು 5 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣಮಾಡುವ ಉದ್ದೇಶವನ್ನು ನೂತನ ಆಡಳಿತ ಮಂಡಳಿ ಹೊಂದಿದೆ. ಇದಕ್ಕಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಹಂತದ ಎಲ್ಲಾ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಂದ ವಂತಿಗೆ ಮತ್ತು ಸಹಕಾರ ಪಡೆಯಲು ಹಾಗೂ ಸಾರ್ವಜನಿಕರ ಬೆಂಬಲ ಮತ್ತು ಆರ್ಥಿಕ ಸಹಾಯ ಪಡೆಯಲು ಉದ್ದೇಶಿಸಿರುವುದಾಗಿ ತಿಳಿಸಿದರು.
PublicNext
09/12/2024 10:38 pm