ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಅಂಗನವಾಡಿ ಕಟ್ಟಡ ಕಾಮಗಾರಿ ಸ್ಥಗಿತ- ದೇವಸ್ಥಾನದ ರೂಮ್‌ ನಲ್ಲಿ ಮಕ್ಕಳಿಗೆ ಪಾಠ!

ಚಿತ್ರದುರ್ಗ: ಚಿತ್ರದುರ್ಗದ ಹೊಸ ಕಲ್ಲಹಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡವಿಲ್ಲದಿರುವುದರಿಂದ ದೇವಸ್ಥಾನದ ರೂಂ ಒಂದರಲ್ಲಿ ಮಕ್ಕಳು ಪಾಠ ಕೇಳುವ ಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದ ಶ್ರೀರಾಮ ದೇವಸ್ಥಾನದ ಕೋಣೆಯಲ್ಲಿ ಅಂಗನವಾಡಿ ಮಕ್ಕಳು ಪ್ರತಿನಿತ್ಯವೂ ಪಾಠ ಕೇಳುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಅಂಗನವಾಡಿಗಾಗಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾಮಗಾರಿ ಸ್ಥಗಿತವಾಗಿದೆ.

ಬೇಸಿಗೆ ಕಾಲದಲ್ಲಂತೂ ಪುಟಾಣಿಗಳು ಈ ಕೋಣೆಯಲ್ಲಿ ಪಾಠ ಕೇಳುವುದು ದುಸ್ತರವಾಗಿದೆ. ಇದರಿಂದ ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಅಂಗನವಾಡಿ ಕಟ್ಟಡ ಕಾಮಗಾರಿ ಪೂರ್ಣ ಮಾಡುವಂತೆ ಆಗ್ರಹಿಸಿದ್ದಾರೆ.

Edited By : Shivu K
PublicNext

PublicNext

09/12/2024 10:49 pm

Cinque Terre

37.78 K

Cinque Terre

0

ಸಂಬಂಧಿತ ಸುದ್ದಿ