ಮೊಳಕಾಲ್ಮುರು: ಗುಂಡ್ಲೂರು ಗ್ರಾಮದಲ್ಲಿ ಬಸವೇಶ್ವರ ಕಾರ್ತಿಕ ಲಕ್ಷ ದೀಪೋತ್ಸವ ಕಾರ್ಯಕ್ರಮ ವೈಭವದಿಂದ ನಡೆಯಿತು.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಾನಾ ವಾದ್ಯ ಮೇಳಗಳೊಂದಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಲಾಯಿತು,ಮೆರವಣಿಗೆಯಲ್ಲಿ ಗೊಂಬೆ ಕುಣಿತ, ನಂದಿಕೋಲು ಕುಣಿತ ಗಮನ ಸೆಳೆದವು.
ಕಾರ್ತಿಕೋತ್ಸವದ ಅಂಗವಾಗಿ ಬಸವೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಮಹಿಳೆಯರು ಹಣತೆಯನ್ನು ಹಚ್ಚಿ ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Kshetra Samachara
10/12/2024 09:31 am