ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಪಾಲಿ ಪ್ರೊಫೈಲ್ ಇನ್ ಸಾಗಿಸುತ್ತಿದ್ದ ಲಾರಿ ಪಲ್ಟಿ - ತಪ್ಪಿದ ದುರಂತ

ಕುಂದಾಪುರ: ಚಾಲಕನ ನಿದ್ದೆಗಣ್ಣಿನಿಂದ ನಿಯಂತ್ರಣ ತಪ್ಪಿದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಯ 66 ರಲ್ಲಿ ಹಂಗಳೂರು ಸಮೀಪ ರಸ್ತೆ ಬಿಟ್ಟು ಡಿವೈಡ್ ಏರಿ ಸರ್ವಿಸ್ ರಸ್ತೆಗೆ ಮಗುಚಿ ಕೊಂಡಿದೆ. ಈ ಘಟನೆ ಮಂಗಳವಾರ ಬೆಳಿಗ್ಗೆ ಸುಮಾರು ಎರಡು ಗಂಟೆಗೆ ನಡೆದಿದೆ. ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಲಾರಿಯು ಮಂಗಳೂರಿನ ಕಾಟಿಪಳ್ಳ ಸಮೀಪದ ಕುತ್ತೆತ್ತೂರು ಎಂಬಲ್ಲಿಂದ ಎಂಆರ್‌ಪಿಎಲ್ ಕಂಪನಿಯಿಂದ ಲಕ್ಷಾಂತರ ಮೌಲ್ಯದ ಮ್ಯಾಂಗ್ಪೋಲ್ ಪಾಲಿಪ್ರೊಫೈಲೀನ್ ಎನ್ನುವ ಪ್ಲಾಸ್ಟಿಕ್ ಕಚ್ಚಾ ವಸ್ತುವನ್ನು ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ತೆರಳುತ್ತಿತ್ತು.

ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಸ್ಥಳೀಯರು ಹಾಗೂ ಪೊಲೀಸರು ಮಗುಚಿ ಬಿದ್ದ ಲಾರಿಯನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vinayak Patil
PublicNext

PublicNext

10/12/2024 10:13 am

Cinque Terre

33.83 K

Cinque Terre

0