ಕೊಡಗು: ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆಯು ಸಂಘದ ಅಧ್ಯಕ್ಷೆ ಗೌರು ಎಂ.ಸೋಮಣ್ಣ ಅಧ್ಯಕ್ಷತೆಯಲ್ಲಿ ನಡೆಯಿತು.
ವಿರಾಜಪೇಟೆಯ ರೋಟರಿ ಪ್ರಾಥಮಿಕ ಶಾಲೆ ಸಭಾಂಗಣದ ನಡೆದ ಸಭೆಯಲ್ಲಿ ವಿವಿಧ ವಿಷಯ ಕುರಿತು ಚರ್ಚಿಸಲಾಯಿತು. ಉಪಾಧ್ಯಕ್ಷ ಶಂಕರ ನಾರಾಯಣ ಹೆಬ್ಬಾರ್ ಸಂಘದ ನಿಧಿಗೆ ಅಂದಾಜು 35,000 ಸಂಗ್ರಹಿಸಿರುವ ಬಗ್ಗೆ ಮಾಹಿತಿ ನೀಡಿದರು. ಕಾರ್ಯದರ್ಶಿ ರಂಜಿತ್ ಸಭೆಯನ್ನುದ್ದೇಶಿಸಿ ಮಾಡಿದರು. ಸಂಘದ ಅಧ್ಯಕ್ಷ ಜೋಸೆಫ್ ಸೆರಿ ಸ್ವಾಗತಿಸಿದರು. ಖಜಾಂಚಿ ಸುರೇಶ್ ವಂದಿಸಿದರು. ಸಭೆಯಲ್ಲಿ 50ಕ್ಕಿಂತ ಹೆಚ್ಚು ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಇದೇ ಸಂದರ್ಭ ಉಡುಪಿ, ಬಾಗಲಕೋಟೆಯಲ್ಲಿ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದ ತಂಡಕ್ಕೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.
Kshetra Samachara
10/12/2024 10:45 am