ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮೂರು ದಿನ ಬೂದಿ ಮುಚ್ಚಿದ ಕೆಂಡದಂತಿರಲಿದೆ ಕಾಫಿನಾಡು…!

ಚಿಕ್ಕಮಗಳೂರು: ಡಿಸೆಂಬರ್ 12, 13, 14ರಂದು ಕಾಫಿನಾಡು ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಿರಲಿದೆ. ಯಾಕಂದ್ರೆ ಕರ್ನಾಟಕದ ಅಯೋಧ್ಯೆ ಎಂದೇ ಖ್ಯಾತಿಯಾಗಿರೋ ಹಿಂದೂ-ಮುಸ್ಲಿಮರ ವಿವಾದಿತ ಧಾರ್ಮಿಕ ಭಾವೈಕ್ಯತಾ ಕೇಂದ್ರ ದತ್ತಪೀಠದಲ್ಲಿ ದತ್ತ ಜಯಂತಿ ನಡೆಯಲಿದೆ.

ಚಿಕ್ಕಮಗಳೂರಲ್ಲಿ ನಡೆಯುವ ದತ್ತಜಯಂತಿ ಸೂಕ್ಷ್ಮ ಸಂಗತಿಯಾಗಿರೋದ್ರಿಂದ ಜಿಲ್ಲಾಡಳಿತ ಜಿಲ್ಲಾದ್ಯಂತ ಹಾಗೂ ದತ್ತಪೀಠದಲ್ಲಿ ಹೈ ಅಲರ್ಟ್ ಘೋಷಿಸಿದ್ದು, ಹಿಂದಿನ ವರ್ಷಗಳಿಗಿಂತ ಈ ವರ್ಷ ಹೆಚ್ಚಿನ ಪೊಲೀಸರನ್ನ ನಿಯೋಜಿಸಲಾಗಿದೆ. ಡಿಸೆಂಬರ್ 12ರಂದು ಸಾವಿರಾರು ಮಹಿಳೆಯರಿಂದ ಅನುಸೂಯ ಜಯಂತಿಯನ್ನು ಆಚರಿಸಿದ್ರೆ, 13 ರಂದು 20 ಸಾವಿರಕ್ಕೂ ಅಧಿಕ ಭಕ್ತರಿಂದ ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. 14ರಂದು ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುವ 25 ಸಾವಿರಕ್ಕೂ ಅಧಿಕ ದತ್ತ ಭಕ್ತರು ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ.

ಈ ಹಿನ್ನೆಲೆ ಜಿಲ್ಲಾದ್ಯಂತ 4000ಕ್ಕೂ ಅಧಿಕ ಪೊಲೀಸರ ಬಂದೋಬಸ್ತ್ ಕಲ್ಪಿಸಿದ್ದು ಜಿಲ್ಲಾಡಳಿತ ಹಿಂದೂ-ಮುಸ್ಲಿಂ ಮುಖಂಡರ ಜೊತೆ ಸಭೆ ಕೂಡ ನಡೆಸಿದೆ. ಯಾರಾದರೂ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ-ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳೋದಾಗಿ ಡಿಸಿ-ಎಸ್ಪಿ ಎಚ್ಚರಿಕೆ ನೀಡಿದ್ದಾರೆ. ಗುರುವಾರದಿಂದ ಶನಿವಾರದವರೆಗೆ ಕಾಫಿನಾಡು ಚಿಕ್ಕಮಗಳೂರು ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಿರೋದ್ರಲ್ಲಿ ಎರಡು ಮಾತಿಲ್ಲ.

ಡ್ಯಾನಿ, ಪಬ್ಲಿಕ್ ನೆಕ್ಸ್ಟ್, ಚಿಕ್ಕಮಗಳೂರು

Edited By : Suman K
Kshetra Samachara

Kshetra Samachara

10/12/2024 12:56 pm

Cinque Terre

5.8 K

Cinque Terre

0

ಸಂಬಂಧಿತ ಸುದ್ದಿ