Av
Headline
ಕೋಲಾರ - ಕೆಜಿಎಫ್ ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ
ಕೆಜಿಎಫ್ - ಕೆಜಿಎಫ್ ಪೊಲೀಸ್ ಜಿಲ್ಲೆಯ 2024ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೇಂದ್ರೀಯ ವಿದ್ಯಾಲಯದ ಶಾಲೆ ಹಾಗೂ ಡಾ|| ಬಿಆರ್.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಕುರಿತು ಜಾಗೃತಿ ಕಾರ್ಯಕ್ರಮವು ನಡೆಯಿತು.
ಬೆಮೆಲ್ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವಿದ್ಯಾಶ್ರೀ ಕುಮಾರಸ್ವಾಮಿ ಅವರು ಬೆಮೆಲ್‌ನಗರದ ಕೇಂದ್ರೀಯ ವಿದ್ಯಾಲಯದ ಶಾಲೆ ಹಾಗೂ ಪಿಎಸ್‌ಐ ಕೆ.ವಿ.ನಾರಾಯಣಸ್ವಾಮಿ ಅವರು ಡಾ|| ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕುರಿತು, ಬಾಲ್ಯ ವಿವಾಹ ನಿಷೇದ ಕಾಯ್ದೆ ಬಗ್ಗೆ, ಮೊಬೈಲ್ ಬಳಕೆಯಿಂದಾಗುವ ದುಷ್ಟರಿಣಾಮ ಮತ್ತು ಅವಶ್ಯಕತೆ ಇದ್ದಲ್ಲಿ ಮಾತ್ರ ಪೋಷಕರ ಸಮಕ್ಷಮ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದರ ಬಗ್ಗೆ ತಿಳುವಳಿಕೆ ನೀಡಿದರು.
Kshetra Samachara
10/12/2024 01:23 pm