ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ - ಹಿಡಿದು ಬುದ್ಧಿ ಕಲಿಸಿದ ಜನ

ನಂಜನಗೂಡು: ಮಹಿಳೆಯರು, ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನು ಬಿಡಿಸಿ ಹೆಸರುಗಳನ್ನು ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್‌ನ್ನು ಗ್ರಾಮಸ್ಥರು ಪ್ಲ್ಯಾನ್ ಮಾಡಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಲಕ್ಷಣ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆ ನಿವಾಸಿ ಶಿವಣ್ಣ(54) ಸಿಕ್ಕಿ ಬಿದ್ದ ವ್ಯಕ್ತಿ. ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನು ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನು ಜೊತೆ ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ. ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು. ಕೆಲವು ಮದುವೆ ಸಂಬಂಧಗಳೂ ಮುರಿದು ಬಿದ್ದಿದ್ದವು. ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಬೆಚ್ಚಿ ಬೀಳಿಸಿತ್ತು. ಇದು ಚಿಂತೆಗೀಡು ಮಾಡಿತ್ತು. ಆ ವ್ಯಕ್ತಿಯನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು. ನಿನ್ನೆ ತಡರಾತ್ರಿ ಸೈಕಲ್‌ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿಸಿ ಬಿಸಿ ಕಜ್ಜಾಯಗಳನ್ನು ಕೊಟ್ಟ ಗ್ರಾಮಸ್ಥರು, ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇಂತಹ ಕಾಮುಕ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಪಟ್ಟು ಹಿಡಿದು ಕುಳಿತಿದ್ದರು. ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಮಹಿಳೆ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Suman K
PublicNext

PublicNext

10/12/2024 01:25 pm

Cinque Terre

23.17 K

Cinque Terre

0