ಮುಂಬೈ: ಮುಂಬೈನ ಕುರ್ಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಪಾದಚಾರಿಗಳು ಮತ್ತು ವಾಹನಗಳಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ರಾತ್ರಿ 9:45 ರ ಸುಮಾರಿಗೆ ಘಟನೆ ಸಂಭವಿಸಿದ್ದು, ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆ ಬಸ್ ಚಾಲಕನ ನಿಯಂತ್ರಣ ತಪ್ಪಿ, ಹಲವಾರು ವಾಹನಗಳು ಮತ್ತು ಪಾದಚಾರಿಗಳ ಮೇಲೆ ಹರಿದು ಹೌಸಿಂಗ್ ಸೊಸೈಟಿಯ ಗೋಡೆಗೆ ಡಿಕ್ಕಿ ಹೊಡೆದಿದೆ.
ಘಟನೆ ನಡೆದಾಗ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ಎದುರಿಗೆ ಸಿಕ್ಕ ಜನರು, ವಾಹನಗಳಿಗೆ ಹೊಡೆಯುತ್ತಾ ಸಾಗಿತು. ಕೊನೆಗೆ ಗೋಡೆಗೆ ಡಿಕ್ಕಿ ಹೊಡೆದ ನಂತರ ಬಸ್ ನಿಂತಿದೆ.
ಮೃತರನ್ನು ಕನ್ನಿಸ್ ಫಾತಿಮಾ ಅನ್ಸಾರಿ, ಶಿವಂ ಕಶ್ಯಪ್, ಅಫ್ರೀನ್ ಅಬ್ದುಲ್ ಸಲೀಂ ಶಾ ಮತ್ತು ಅನಮ್ ಶೇಖ್ ಎಂದು ಗುರುತಿಸಲಾಗಿದೆ.
PublicNext
10/12/2024 03:32 pm