ಮಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಿಸಿದೆ. ಆದ್ದರಿಂದ ನಾಳೆಗೆ ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
PublicNext
10/12/2024 03:38 pm