ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಬ್ರೇಕಿಂಗ್: ವಾಹನ, ಪೊಲೀಸರ ಮೇಲೆ ಕಲ್ಲು ತೂರಾಟ, ಹಲವರಿಗೆ ಗಾಯ

ಬೆಳಗಾವಿ: ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ನೇತೃತ್ವದಲ್ಲಿ 10 ಸಾವಿರಕ್ಕೂ ಅಧಿಕ ಪಂಚಮಸಾಲಿ ಹೋರಾಟಗಾರರು ಸುವರ್ಣ ಸೌಧ ಮುತ್ತಿಗೆ ಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಇದೇ ವೇಳೆ ವಾಹನ ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದ ಪರಿಣಾಮ ಹಲವರು ಗಾಯಗೊಂಡಿದ್ದಾರೆ.

ಕೊಂಡಸಕೊಪ್ಪದಿಂದ ಹೊರಟ ಪ್ರತಿಭಟನಾ ರ‌್ಯಾಲಿಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಇತ್ತ ಸುವರ್ಣ ಸೌಧದ ಎದುರು ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಸುವರ್ಣ ಸೌಧ ಮುತ್ತಿಗೆ ಹಾಕಲು ಹೊರಟ ಪ್ರತಿಭಟನಾಕಾರರು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದಿದ್ದಾರೆ. ಈ ವೇಳೆ ನಡೆದ ತಳ್ಳಾಟ, ನೂಕಾಟ ಮತ್ತು ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ.

ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಈರಣ್ಣ ಕಡಾಡಿ, ಶಾಸಕ ಅರವಿಂದ ಬೆಲ್ಲದ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Edited By : Nagesh Gaonkar
PublicNext

PublicNext

10/12/2024 03:53 pm

Cinque Terre

29.42 K

Cinque Terre

2

ಸಂಬಂಧಿತ ಸುದ್ದಿ