ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಬ್ಯಾಂಕ್‌ಗಳಿಗೆ ನಕಲಿ ಚಿನ್ನ ಅಡವಿಟ್ಟು ವಂಚನೆ - ಓರ್ವ ಆರೋಪಿ ಅರೆಸ್ಟ್, ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ತಂಡ ರಚನೆ

ಕೊಡಗು : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮಾಹಿತಿ ನೀಡಿದ್ದಾರೆ.

ಕುಂಜಿಲ ಗ್ರಾಮದ ನಿವಾಸಿ ಮೊಹಮ್ಮದ್ ರಿಜ್ವಾನ್.ಕೆ.ಎ (35) ಬಂಧಿತ ಆರೋಪಿಯಾಗಿದ್ದಾನೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಲ್ಲಿ 8 ಚಿನ್ನದ ಬಳೆಗಳನ್ನು ಅಡಮಾನ ಮಾಡಿ ಸಾಲ ಪಡೆದುಕೊಳ್ಳುವ ಸಂದರ್ಭ ಆಭರಣವನ್ನು ಪರಿಶೀಲಿಸಿದಾಗ ನಕಲಿ ಆಭರಣ ಎಂದು ತಿಳಿದು ಬಂದಿದೆ.

ಮೊಹಮ್ಮದ್ ರಿಜ್ವಾನ್.ಕೆ.ಎ ಈ ಹಿಂದೆ ಇದೇ ಶಾಖೆಯಲ್ಲಿ ಆಡಮಾನ ಮಾಡಿರುವ ಆಭರಣಗಳನ್ನು ಮತ್ತೊಮ್ಮೆ ಪರಿಶೀಲಿಸಿದಾಗ ಎಲ್ಲಾ ಆಭರಣಗಳು ನಕಲಿಯಾಗಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿನ ವಿವಿಧ ಕೆಡಿಸಿಸಿ ಬ್ಯಾಂಕ್ ಶಾಖೆಗಳಲ್ಲಿ ಈತ ಅಡಮಾನ ಮಾಡಿರುವ ಚಿನ್ನವನ್ನು ಪರಿಶೀಲಿಸಿದ್ದು, ವಿರಾಜಪೇಟೆ, ಕಡಂಗ, ಭಾಗಮಂಡಲ ಮತ್ತು ಮಡಿಕೇರಿ ಕಾಲೇಜು ರಸ್ತೆಯಲ್ಲಿರುವ ಶಾಖೆಯಲ್ಲಿ ನಕಲಿ ಆಭರಣಗಳನ್ನು ಆಡಮಾನ ಮಾಡಿ ಸಾಲ ಮಾಡಿರುವುದು ಕಂಡು ಬಂದಿದೆ.

ಮಡಿಕೇರಿ ನಗರ, ವಿರಾಜಪೇಟೆ ನಗರ, ಭಾಗಮಂಡಲ ಮತ್ತು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಮೊಹಮ್ಮದ್ ರಿಜ್ವಾನ್.ಕೆ.ಎ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಹಚ್ಚುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Edited By : Abhishek Kamoji
Kshetra Samachara

Kshetra Samachara

10/12/2024 05:14 pm

Cinque Terre

560

Cinque Terre

0

ಸಂಬಂಧಿತ ಸುದ್ದಿ