ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವೀರ ಸೇನಾನಿಗಳಿಗೆ ಅಗೌರವ ಪ್ರಕರಣ - ಆರೋಪಿ ಗಡಿಪಾರಿಗೆ ಆಗ್ರಹಿಸಿ ಡಿ.12ರಂದು ಕೊಡಗು ಬಂದ್

ಕೊಡಗು : ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಗೌರವ ತೋರಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12ರಂದು ಕೊಡಗು ಬಂದ್ ಗೆ ಕರೆ ನೀಡಿದೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಶಾಂತಿ ಮತ್ತು ಸಹಬಾಳ್ವೆಗೆ ಹೆಸರಾಗಿದ್ದ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಜಾತೀಯ ಮತ್ತು ಮತೀಯ ಸಂಘರ್ಷ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಂಡು ಬರುತ್ತಿದೆ.

ಇಂದು ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದಿನ ಪೀಳಿಗೆ ಕೊಡಗಿನಲ್ಲಿ ಕೇವಲ ದ್ವೇಷ ಮತ್ತು ಅಸೂಯೆಯ ವಾತಾವರಣದಲ್ಲಿ ಬದುಕಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗುವ ಸಂಭವವಿದೆ.

ಈ ರೀತಿಯ ಪರಿಸ್ಥಿತಿ ಪುನರಾವರ್ತನೆಯಾಗಬಾರದು ಎನ್ನುವ ಉದ್ದೇಶದಿಂದ ಎಲ್ಲಾ ಜಾತಿ ಜನಾಂಗದವರನ್ನು ಒಗ್ಗೂಡಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟವನ್ನು ರಚಿಸಿದ್ದು, ಇದರ ಮೂಲಕ ಒಗ್ಗಟ್ಟಿನ ಹೋರಾಟವನ್ನು ರೂಪಿಸಲಾಗುವುದು ಎಂದರು.

ಈ ಸಂಘಟನೆಯ ಮೊದಲ ಕಾರ್ಯಕ್ರಮವಾಗಿ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವ ವ್ಯಕ್ತಿಯನ್ನು ಕನಿಷ್ಠ ಆರು ತಿಂಗಳ ಕಾಲ ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಡಿ.12ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಕೊಡಗು ಬಂದ್ ಗೆ ಕರೆ ನೀಡುತ್ತಿರುವುದಾಗಿ ತಿಳಿಸಿದರು.

Edited By : Nagesh Gaonkar
PublicNext

PublicNext

10/12/2024 05:36 pm

Cinque Terre

16.36 K

Cinque Terre

0

ಸಂಬಂಧಿತ ಸುದ್ದಿ